ಭಾರತ, ಫೆಬ್ರವರಿ 10 -- ಬೆಂಗಳೂರು: ಚಳಿಗಾಲದಲ್ಲೂ ಪ್ರಖರ ಬಿಸಿಲಿಗೆ ಕರ್ನಾಟಕದ ಜನ ಹೈರಾಣಾಗಿದ್ದಾರೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಬೇಸಿಗೆ ಆರಂಭಕ್ಕೂ ಮುನ್ನವೇ, ಹೆಚ್ಚಿನ ತಾಪಮಾನ ಕಂಡುಬರುತ್ತಿದೆ. ಹಗಲು ಭಾರಿ ಬಿಸಿಲು, ರಾತ್ರಿ ಸ್ವಲ್ಪ ಚಳಿ ಎಂಬಂತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ದಾಖಲಾಗಿದೆ. ಸದಾ ತಂಪಾಗಿರುವ ವಿಶ್ವದ ಉದ್ಯಾನ ನಗರಿ ಬೆಂಗಳೂರಿನಲ್ಲಿಯೂ ಗರಿಷ್ಠ ತಾಪಮಾನ 30 ಡಿಗ್ರಿಯವರೆಗೆ ತಲುಪಿದೆ. ಈ ನಡುವೆ ಭಾರತ ಹವಾಮಾನ ಇಲಾಖೆಯ ಬೆಂಗಳೂರು ಹವಾಮಾನ ಕೇಂದ್ರದ ವರದಿಯಂತೆ (ಫೆ.9) ದಾವಣಗೆರೆ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿಅತಿ ಕಡಿಮೆ ಉಷ್ಣಾಂಶ 13.5 ಡಿಗ್ರಿ ಸೆಲ್ಸಿಯಸ್ ದಾವಣಗೆರೆಯಲ್ಲಿ ದಾಖಲಾಗಿದೆ. ಕಳೆದ ದಿನ ರಾಜ್ಯಾದ್ಯಂತ ಒಣ ಹವೆ ಇತ್ತು. ಇಂದು (ಫೆ.10, ಸೋಮವಾರ) ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಂಜು ಇರುವ ಸಾಧ್ಯತೆ ಇದೆ...