Bengaluru, ಏಪ್ರಿಲ್ 9 -- Karnataka Weather: ಕರ್ನಾಟಕದ ಬಹುತೇಕ ಕಡೆಗಳಲ್ಲಿ ತೀವ್ರ ಬಿಸಿಲಿನ ವಾತಾವರಣ ಮುಂದುವರಿದಿದ್ದರೆ, ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಪೂರ್ವ ಮುಂಗಾರು ಮಳೆಯಿಂದ ಕೆಲವೆಡೆ ಬೆಳೆಗಳಿಗೆ ಹಾನಿಯಾಗಿರುವುದು ವರದಿಯಾಗಿದೆ. ಆದರೆ ಮಳೆ ಸುರಿದ ಪ್ರದೇಶಗಳಲ್ಲಿ ಬಿಸಿಯ ವಾತಾವರಣ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ನಿನ್ನೆ (ಏಪ್ರಿಲ್ 8, ಮಂಗಳವಾರ) ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ 4 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ಬೆಳಗಾವಿ ಜಿಲ್ಲೆಯ ಆಬ್ಸಿ, ರಾಯಚೂರು ಜಿಲ್ಲೆ ಮುದಗಲ್, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಹಳಿಯಾಳದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.

ಕರ್ನಾಟಕದ ಕರಾವಳಿಯ ಕೆಲವೊಂದು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ವರಿಗೆ ಹೆಚ್ಚಳವಾಗಿದೆ. ರಾಜ್ಯದ ಅತಿ ಹೆಚ್ಚು ಉಷ್ಣಾಂಶ 42.2 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. ಬೇಸಿಗೆಯ ರಣ ಬಿಸಿಲಿನ ಪರಿಣಾಮವಾಗಿ...