ಭಾರತ, ಜೂನ್ 2 -- ಬೆಂಗಳೂರು: ಪೂರ್ವ ಮುಂಗಾರು ಕರ್ನಾಟಕದಲ್ಲಿ ಅಬ್ಬರಿಸುತ್ತಿದ್ದು, ಇಂದು (ಜೂನ್ 2, ಶುಕ್ರವಾರ) ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Bengaluru Rain) ಸಂಭವ ಇದೆ. ಕಳೆದ ಕೆಲವು ದಿನಗಳಿಂದ ಸುರಿದ ಮಳೆ ನಗರ ಹಲವೆಡೆ ಭಾರಿ ಅವಾಂತರಗಳನ್ನೇ ಸೃಷ್ಟಿ ಮಾಡಿದ್ದು, ಕೆಲವೆಡೆ ಮರದ ಕೊಂಬೆಗಳು ಧರೆಗುರುಳಿ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಬಿಬಿಎಂಪಿ ಸಿಬ್ಬಂದಿ ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ಧಾರಾಕಾರ ಮಳೆಯಿಂದಾಗಿ ಕೆಲವು ರಸ್ತೆಗಳು ಜಲಾವೃತಗೊಂಡು ವಾಹನ ಸವಾರರ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.

ನಿನ್ನೆ (ಜೂನ್ 1, ಗುರುವಾರ) ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿತ್ತು, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ತಲಾ ...