ಭಾರತ, ಏಪ್ರಿಲ್ 5 -- Karnataka Weather: ಒಡಿಶಾ ಕರಾವಳಿ ಭಾಗದಲ್ಲಿನ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿರುವ ಪರಿಣಾಮ ಕರ್ನಾಟಕ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮಳೆಯಾಗುತ್ತಿದೆ. ರಣ ಬಿಸಿಲ ಬೇಗೆಗೆ ಬಳಲಿ ಬೆಂಡಾಗಿದ್ದ ಜನರಿಗೆ ವರುಣ ತಂಪೆರೆದಂತಾಗಿದೆ. ನಿನ್ನೆ (ಏಪ್ರಿಲ್ 4, ಶುಕ್ರವಾರ) ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಇಂದು (ಏಪ್ರಿಲ್ 5, ಶನಿವಾರ) ರಾಜಧಾನಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿನ ವರದಿಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರದಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ. ಕಲಬುರ್ಗಿಯ ಚಿತ್ತಾಪುರದಲ್ಲಿ 7, ಚಿಕ್ಕ ಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಚಿತ್ರದುರ್ಗದ ಆಬ್ಸಿಯಲ್ಲಿ ತಲಾ 6 ಸೆಂಟಿ ಮೀಟರ್, ಶಿವಮೊಗ್ಗದ ಭದ್ರಾವತಿಯಲ್ಲಿ 5, ಬೀದರ್ ಜಿಲ್ಲೆಯ ಹುಮನಾಬಾದ್, ಚಾಮರಾಜನಗರ...