ಭಾರತ, ಏಪ್ರಿಲ್ 8 -- Karnataka Weather: ರಣ ಬಿಸಿಲಗೆ ಬಳಲಿ ಬೆಂಡಾಗಿದ್ದ ರಾಜ್ಯದ ಜನತೆಗೆ ವರುಣ ಕೃಪೆ ತೋರುತ್ತಿದ್ದು, ಕೆಲವೊಂದು ಪ್ರದೇಶಗಳಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದೆ. ಇಂದು (ಏಪ್ರಿಲ್ 8, ಮಂಗಳವಾರ) 14 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಕಳೆದೊಂದು ವಾರದಿಂದ ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದ್ದು, ತಾಪಮಾನ ಕೊಂಚ ಇಳಿಕೆಯಾಗಿದೆ.

ಇಂದು ಎಲ್ಲೆಲ್ಲಿ ಮಳೆಯಾಗಲಿದೆದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 11ರ ಶುಕ್ರವಾರದವರಿಗೆ ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ಒಣ ಹವೆ ಮುಂದುವರಿಯಲಿದೆ.

ಏಪ್ರಿಲ್ 7ರ ಹವಾಮಾನ ವರದಿಯ ಪ್ರಕಾರ, ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗ...