Bangalore, ಫೆಬ್ರವರಿ 14 -- ಬೆಂಗಳೂರು: ಕರ್ನಾಟಕ ಸರ್ಕಾರವು ಕರ್ನಾಟಕ ಆಡಳಿತ ಸೇವೆಯ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಉಡುಪಿ ಅಪರ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ, ಧಾರವಾಡದ ಕೃಷಿ ವಿಶ್ವವಿದ್ಯಾನಿಲಯಕ್ಕೆ ನೂತನ ಕುಲಸಚಿವರನ್ನು ನೇಮಕ ಮಾಡಲಾಗಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಕೆಲವು ಕೆಎಎಸ್‌ ಅಧಿಕಾರಿಗಳಿಗೆ ಹುದ್ದೆಯನ್ನು ನೀಡಲಾಗಿದೆ. ವರ್ಗ ಆಗಿರುವ ಹಿರಿಯ ಕೆಎಎಸ್‌ ಅಧಿಕಾರಿಗಳ ಪಟ್ಟಿ ಹಾಗೂ ಅವರು ನಿಯೋಜನೆಗೊಂಡಿರುವ ಹುದ್ದೆಯ ವಿವರ ಹೀಗಿದೆ.

ಸಿಬ್ಬಂದಿ ಆಡಳಿತ ಸುಧಾರಣೆ ಕಾರ್ಯಕ್ರಮ ನಿರ್ದೇಶಕರಾಗಿದ್ದ ಡಾ.ನಾಗೇಂದ್ರ ಎಫ್‌ ಹೊನ್ನಳ್ಳಿ ಅವರನ್ನು ಬೆಂಗಳೂರಿನಲ್ಲಿ ನಗರಾಭಿವೃದ್ದಿ ಇಲಾಖೆ ಅಪರ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಹಿರಿಯ ಅಧಿಕಾರಿ ಡಾ.ಎ.ಸೌಜನ್ಯ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯ ಜಾಗೃತಾಧಿಕಾರಿಯಾಗಿ ನಿಯೋಜಿಸಲಾಗಿದೆ.

ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿಯಂತ್ರಕರಾಗಿದ್ದ ಅನಿತಾ...