ಭಾರತ, ಮಾರ್ಚ್ 11 -- Katrina Kaif in Kukke Subramanya: ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಕರ್ನಾಟಕದ ಜನಪ್ರಿಯ ದೇಗುಲ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ಇವರು ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗಿಯಾಗಲಿದ್ದಾರೆ. ಸಾಂಪ್ರದಾಯಿಕ ಸರಳ ಉಡುಗೆಯಲ್ಲಿ ಆಗಮಿಸಿದ ನಟಿಯು ತನ್ನ ಗುರುತು ಎಲ್ಲರಿಗೂ ಸಿಗದಂತೆ ಮುಖಕ್ಕೆ ಮಾಸ್ಕ್‌ ಧರಿಸಿದ್ದರು. ತಲೆಗೆ ದುಪ್ಪಟ್ಟಾ ಹಾಕಿಕೊಂಡಿದ್ದರು. ದೇವಾಲಯದಲ್ಲಿ ಸುಬ್ರಹ್ಮಣ್ಯ ದೇವರ ದರ್ಶನ ಮಾಡಿದ್ದಾರೆ.

ವರದಿಗಳ ಪ್ರಕಾರ ಕತ್ರಿನಾ ಕೈಫ್‌ ಅವರು ನಿನ್ನೆ ತಡರಾತ್ರಿ ಸುಬ್ರಹ್ಮಣ್ಯ ತಲುಪಿದ್ದರು. ತಲೆಗೆ ದುಪ್ಪಟ್ಟ ಹಾಕಿಕೊಂಡು ದೇವರ ದರ್ಶನ ಪಡೆದಿದ್ದರು. ನಾಗದೋಷ ಮತ್ತು ಸಂಕಷ್ಟಗಳ ಪರಿಹಾರಕ್ಕಾಗಿ ಕತ್ರಿನಾ ಕೈಫ್‌ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರರರ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಇತ್ತೀಚೆಗೆ ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳದಲ್ಲಿಯೂ ಭಾಗಿಯಾಗಿದ್ದರು. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದರು. ಇದೀಗ ...