ಭಾರತ, ಏಪ್ರಿಲ್ 15 -- ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಯಾರೆಲ್ಲ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿದ್ದೀರೊ ಅವರೆಲ್ಲರೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಹಾಜರಾಗಿ ಪರೀಕ್ಷೆ ಬರೆಯಬಹುದು. ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ಇಂದಿನಿಂದ ಹಾಜರಾಗುತ್ತಿದ್ದಾರೆ. ಏಪ್ರಿಲ್‌ 15ರಂದು ಕನ್ನಡ ಹಾಗೂ 16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ ಪರೀಕ್ಷೆ ನಡೆಯಲಿದೆ.

ಈ ವರ್ಷ 3.3 ಲಕ್ಷ ಅಭ್ಯರ್ಥಿಗಳು ಸಿಇಟಿ ಬರೆಯಲು ಶುಲ್ಕ ಪಾವತಿಸಿದ್ದಾರೆ. ಸಾಕಷ್ಟು ವಿದ್ಯಾರ್ಥಿಗಳು ತಮ್ಮ ಆಕಾಂಕ್ಷೆಯಂತೆ ಮುಂದಿನ ಶಿಕ್ಷಣ ಪಡೆದುಕೊಳ್ಳುವ ಸಲುವಾಗಿ ಸಿಇಟಿ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಸಂಖ್ಯೆಯನ್ನು ನೋಡಿದರೆ ಸಾಕಷ್ಟು ಜನರು ಉನ್ನತ ಶಿಕ್ಷಣದ ಬಗ್ಗೆ ಆಸಕ್ತಿ ಹೊಂದಿರುವುದು ತಿಳಿದು ಬರುತ್ತದೆ.

ಪರೀಕ್ಷಾ ವೇಳಾಪಟ್ಟಿಏಪ್ರಿಲ್‌ 1...