Bengaluru, ಮೇ 14 -- ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏಪ್ರಿಲ್ 16 ಮತ್ತು 17, 2025 ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಲಿಖಿತ ಪರೀಕ್ಷೆಯನ್ನು ನಡೆಸಿದ್ದು, ಪರೀಕ್ಷೆಗೆ ಹಾಜರಾದ ಮೂರು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಫಲಿತಾಂಶ ಪ್ರಕಟಗೊಳ್ಳಲು ಕಾಯುತ್ತಿದ್ದಾರೆ. ಕೆಸಿಇಟಿ ಫಲಿತಾಂಶ 2025 ಮತ್ತು ಅಂಕಪಟ್ಟಿ ಮೇ 2025 ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಕೆಸಿಇಟಿ ಫಲಿತಾಂಶ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ನಲ್ಲಿ ಲಭ್ಯವಾಗಲಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯದ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ಆಯೋಜಿಸುತ್ತದೆ. ಕನ್ನಡ ಭಾಷಾ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು KCET ಕೌನ್ಸೆಲಿಂಗ್‌ಗೆ ಹಾಜರಾಗಬೇಕಾಗುತ್ತದೆ. CETಯಲ್ಲಿ ಭಾಗವಹಿಸುವ ಕಾಲೇಜುಗಳು KCET ಕಟ್-ಆಫ್ ಅಂಕಗಳನ್ನು ಕಾಲೇಜುಗಳ ಕೌನ್ಸೆಲಿಂಗ...