ಭಾರತ, ಮೇ 19 -- ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority -ಕೆಇಎ) ಶೀಘ್ರದಲ್ಲೇ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆ ಇದೆ. ವರದಿಗಳ ಪ್ರಕಾರ, ಕೆಸಿಇಟಿ 2025 ಫಲಿತಾಂಶವನ್ನು ಮೇ 25ರೊಳಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಕರ್ನಾಟಕದ ಕಾಲೇಜುಗಳಲ್ಲಿ ಪದವಿಪೂರ್ವ ಎಂಜಿನಿಯರಿಂಗ್, ಫಾರ್ಮಸಿ ಮತ್ತು ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕೆಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಕರ್ನಾಟಕ ಸಿಇಟಿ ಪರೀಕ್ಷೆಯ ಫಲಿತಾಂಶವು ಅಧಿಕೃತ ವೆಬ್ಸೈಟ್ karresults.nic.in ಇದರಲ್ಲಿ ಪ್ರಟವಾಗಲಿದೆ. ಫಲಿತಾಂಶ ಬಿಡುಗಡೆ ದಿನ ಕರ್ನಾಟಕ ಉನ್ನತ ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಿದ್ದಾರೆ.
karresults.nic.in ಮಾತ್ರವಲ್ಲದೆ kea.kar.nic.in ಮತ್ತು cetonline.karnataka.gov.in ಇದರಲ್ಲೂ ಫಲಿತಾಂಶ ಲಭ್ಯವಾಗಲಿದೆ.
ಪರೀಕ್ಷೆ...
Click here to read full article from source
To read the full article or to get the complete feed from this publication, please
Contact Us.