Bangalore, ಜನವರಿ 31 -- Kittur Chennamma Award: 2023-24ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. 2024-25 ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ.

ಜನವರಿ 1, 2024 ರಿಂದ ಡಿಸೆಂಬರ್ 31, 2024ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆ ...