Kodagu, ಮಾರ್ಚ್ 28 -- Kodagu Crime:ವ್ಯಕ್ತಿಯೊಬ್ಬ ತನ್ನ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕು ಬೇಗೂರು ಕೊಳತೋಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೊಲೆಯಾದವರನ್ನು ಕಾಫಿ ತೋಟದ ಮನೆಯಲ್ಲಿ ವಾಸವಿದ್ದ ಕಾರ್ಮಿಕರಾದ ಕರಿಯ (75), ಗೌರಿ (70). ಅವರ ಪುತ್ರಿ ನಾಗಿ (35) ಹಾಗೂ ನಾಗಿ ಪುತ್ರಿ ಕಾವೇರಿ(6 ) ಎಂದು ಗುರುತಿಸಲಾಗಿದೆ. ಅವರದ್ದೇ ಕುಟುಂಬದ ವ್ಯಕ್ತಿ ಗಿರೀಶ್‌ ಎಂಬಾತ ಕತ್ತಿಯಿಂದ ಭೀಕರವಾಗಿ ಕೊಲೆ ಮಾಡಿರುವುದು ತನಿಖೆಯ ವೇಳೆ ಬಯಲಾಗಿದೆ. ಈ ಕುರಿತು ಕೊಡಗು ಎಸ್ಪಿ ರಾಮರಾಜನ್‌ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಳಿಯನೇ ಕುಟುಂಬದವರನ್ನು ಕೊಲೆ ಮಾಡಿರುವ ಬಗ್ಗೆ ಸ್ಥಳೀಯವಾಗಿ ಆಕ್ರೋಶ ವ್ಯಕ್ತವಾಗಿದೆ.

ಗಿರೀಶ್‌ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಈತನೊಂದಿಗೆ ಕುಟುಂಬದವರು ವಾಸವಿದ್ದರು. ಗಿರೀಶನ ಅಕ್ರಮ ಸಂಬಂಧದ ವಿಚಾರವಾಗಿ ಮನೆಯಲ್ಲಿ ಆಗಾಗ ಜಗಳ ನಡೆಯುತ್ತಿತ್ತ...