Bangalore, ಏಪ್ರಿಲ್ 8 -- Kodagu News: ಬೆಂಗಳೂರು: ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಪ್ರಕರಣದ ಪ್ರಮುಖ ಆರೋಪಿ ತೆನ್ನಿರ ಮೈನಾ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಏಳು ದಿನಗಳ ಒಳಗಾಗಿ ವಿಚಾರಣೆಗೆ ಆಗಮಿಸಿ ಪ್ರಕರಣ ಕುರಿತು ವಿವರಣೆ ನೀಡಬೇಕು ಎಂದು ನೋಟಿಸ್‌ ನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದು ಕಡೆ ಆರೋಪಿ ತೆನ್ನಿರ ಮೈನಾ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿನಯ್‌ ಕಚೇರಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣ ನಡೆದ ಸ್ಥಳದಿಂದ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಅವರ ಮೊಬೈಲ್‌, ಲ್ಯಾಪ್‌ ಟಾಪ್‌ ಹಾಗೂ ಡೆತ್‌ ನೋಟ್‌ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಾಗಿತ್ತು. ಎಫ್‌ಎಸ್‌ಎಲ್‌ ತಜ್ಞರು ಪರಿಶೀಲನೆ ಶ...