Kodagu, ಮಾರ್ಚ್ 12 -- Kodagu Tourism: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ವಿದೇಶಿ ಪ್ರವಾಸಿಗರ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಂತರ ಕರ್ನಾಟಕದ ಕಾಶ್ಮೀರ ಎಂದು ಕರೆಯಿಸಿಕೊಳ್ಳುವ ಕೊಡಗಿನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಕೊಡಗು ಜಿಲ್ಲೆಯ ಪ್ರವಾಸಿ ಸ್ಥಳ, ಹೋಂಸ್ಟೇ ಹಾಗೂ ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇದುವರೆಗೆ ನೋಂದಣಿ ಆಗದಿರುವ ಹೋಂಸ್ಟೇಗಳು ಕಡ್ಡಾಯವಾಗಿ ನೋಂದಣಿ ಆಗಬೇಕು. ಪ್ರವಾಸಿ ಸ್ಥಳಗಳಲ್ಲಿ, ಹೋಂಸ್ಟೇ, ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆ ಸಿಸಿಟಿವಿ ಅಳವಡಿಸುವುದು, ಹೋಂಗಾರ್ಡ್‍ಗಳ ನಿಯೋಜನೆ, ರಾತ್ರಿ ವೇಳೆಯಲ್ಲಿ ಬೆಳಕು ವ್ಯವಸ್ಥೆ ಮಾಡುವುದು ಹೀಗೆ ಹಲವು ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ನಿರ್ವಹಿಸುವ ಕುರಿತು ಜಿಲ್ಲೆಯ ಹೋಟೆಲ್, ರೆಸಾರ್ಟ್...