ಭಾರತ, ಫೆಬ್ರವರಿ 11 -- ಕರ್ನಾಟಕ ಲೋಕಸೇವಾ ಆಯೋಗ (KPSC)ವು ಕೃಷಿ ವಲಯದಲ್ಲಿ 273 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ನೇಮಕಾತಿ 2025 ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೆಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಫೆ. 15ರವರೆಗೆ ಅವಕಾಶವಿದೆ. ಅರ್ಜಿ ಸಲ್ಲಿಕೆ ವಿಂಡೋ ಫೆ. 05ರಂದು ತೆರೆಯಲಾಗಿದೆ. ಈ ನೇಮಕಾತಿ ಪ್ರಕ್ರಿಯೆ ಮೂಲಕ 42 ಕೃಷಿ ಅಧಿಕಾರಿ ಹುದ್ದೆಗಳು ಮತ್ತು 231 ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ವಿವರವಾದ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಈ ಕೆಳಗಿನ ಪದವಿಗಳಲ್ಲಿ ಯಾವುದಾದರೂ ಒಂದನ್ನು ಪೂರ್ಣಗೊಳಿಸಿರಬೇಕು. (ಅಭ್ಯರ್ಥಿಗಳು ತಮ್ಮ ಪದವಿಯು ಸರ್...