Bangalore, ಫೆಬ್ರವರಿ 6 -- ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಪಿ.ಎಂ,ನರೇಂದ್ರ ಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಳವಳ್ಳಿ ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿರುವ ನರೇಂದ್ರಸ್ವಾಮಿ ಅವರು ಈ ಬಾರಿಯೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಚಲುವರಾಯಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ನರೇಂದ್ರ ಸ್ವಾಮಿ ಅವರಿಗೆ ಸಚಿವ ಸ್ಥಾನ ದೊರೆತಿರಲಿಲ್ಲ. ಮುಂದೆ ಸಚಿವ ಸ್ಥಾನದ ಅವಕಾಶ ಪಡೆಬಹುದು ಎಂದುಕೊಳ್ಳಲಾಗಿತ್ತು. ಇದರ ನಡುವೆಯೇ ಕರ್ನಾಟಕ ಸರ್ಕಾರ ಪ್ರಮುಖ ನಿಗಮ ಮಂಡಳಿಗಳಲ್ಲಿ ಒಂದಾಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಿಸಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹಿಂದಿನ ಸರ್ಕಾರದಲ್ಲಿ ಡಾ.ಕೆ.ಸುಧಾಕರ್‌ ಅವರನ್ನು ನೇಮಿಸಲಾಗಿತ್ತು. ಆನಂತರ ಬಿಜೆಪಿ ಸರ್ಕಾರ ಬಂದಾಗ ಡಾ.ಶಾಂತ್‌ ತಿಮ್ಮಯ್ಯ ಅವರನ್ನು ನೇಮಿಸಲಾಗಿತ್ತು. ಕರ್ನಾಟಕದಲ್ಲ...