ಭಾರತ, ಮಾರ್ಚ್ 15 -- ಮಂಗಳೂರು: ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು.
ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿ ಯವರನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು .ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್, ಮುಂತಾದವರು ಉಪಸ್ಥಿತರಿದ್ದರು.
ಇತ್ತೀಚೆಗೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಕೂಡ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿದ್ದರು. ಸರ್ಪ ಸಂಸ್ಕಾರ ಮತ್ತು ಆಶ್ಲೇಷಾ ಪೂಜೆಯಲ್ಲಿ ಭಾಗಿಯಾಗಿದ್ದರು. ಸಾಂಪ್ರದಾಯಿಕ ಸರಳ ಉಡುಗೆಯಲ್ಲಿ ಆಗಮಿಸಿದ ನಟಿಯು ತನ್ನ ಗುರುತು ಎಲ್ಲರಿಗೂ ಸಿಗದಂತೆ ಮುಖಕ್ಕೆ ಮಾ...
Click here to read full article from source
To read the full article or to get the complete feed from this publication, please
Contact Us.