ಭಾರತ, ಫೆಬ್ರವರಿ 6 -- Kumbh Mela 2025: ಮೈಸೂರು ಜಿಲ್ಲೆಯಲ್ಲಿ ಕಾವೇರಿ, ಕಬಿನಿ ನದಿಗಳ ಪವಿತ್ರ ಸಂಗಮ ಸ್ಥಳ ತಿರುಮಕೂಡಲು ನರಸೀಪುರ (ತಿ. ನರಸೀಪುರ) ದಲ್ಲಿ ಫೆಬ್ರವರಿ 10 ರಿಂದ 12 ರವರೆಗೆ ಕುಂಭಮೇಳ 2025ಕ್ಕೆ ಸಿದ್ದತೆಗಳು ನಡೆದಿವೆ. ಈ ಕುಂಭಮೇಳಕ್ಕೆ ಸರ್ಕಾರ 6 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಇದನ್ನು ಸಚಿವ ರಾಮಲಿಂಗಾ ರೆಡ್ಡಿ ದೃಢಪಡಿಸಿದ್ದು, ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ತಿರುಮಕೂಡಲು ನರಸೀಪುರ (ಟಿ.ನರಸೀಪುರ)ದಲ್ಲಿ ಫೆ 10ರಿಂದ 12ರ ತನಕ ನಡೆಯಲಿರುವ ಕುಂಭ ಮೇಳಕ್ಕೆ ದಿನಗಣನೆ ಶುರುವಾಗಿದೆ. ಈ ಹಂತದಲ್ಲಿ ಕುಂಭ ಮೇಳಕ್ಕೆ 6 ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

"ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸುವ ಸಲುವಾಗಿ ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ ಸರ್ಕಾರವು ಟಿ.ನರಸೀಪುರದ ಕುಂಭಮೇಳಕ್ಕೆ Rs.6 ಕೋಟಿ‌ ಅನುದಾನ‌ ಬಿಡುಗಡೆ ಮಾಡಿದೆ. ಟಿ.ನರಸೀಪುರದ ತ್ರಿವೇಣಿ ಸ...