ಭಾರತ, ಜನವರಿ 29 -- ಬೆಳಗಾವಿ: ಪ್ರಯಾಗ್​ರಾಜ್​ನ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೆಳಗಾವಿಯ ತಾಯಿ ಮತ್ತು ಮಗಳ ಜೊತೆಗೆ ಮತ್ತೊರ್ವ ಬೆಳಗಾವಿಯ ಯಾತ್ರಾರ್ಥಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಮೇಘಾ ಹತ್ತರವಾಠ್‌, ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಅವರು ಇಂದು‌‌ ಬೆಳಗ್ಗೆ ಪ್ರಯಾಗ್​ರಾಜ್​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪವಿತ್ರ ಸ್ನಾನಕ್ಕಾಗಿ ಯಾತ್ರಿಕರ ಆಗಮನದ ಸಂಖ್ಯೆ ಹೆಚ್ಚಾಗಿತ್ತು. ಈ ವೇಳೆ ನೂಕು-ನುಗ್ಗಲು ಉಂಟಾಗಿ ಕಾಲ್ತುಳಿತ ನಡೆದಿತ್ತು.

ಬೆಳಗಾವಿಯಲ್ಲಿರುವ ಕುಟುಂಬಸ್ಥರಿಗೆ ಬೆಳಗ್ಗೆಯಿಂದ ಇಬ್ಬರ ಸಂಪರ್ಕ ಸಿಕ್ಕಿರಲಿಲ್ಲ. ಫೋನ್‌ ರಿಂಗ್ ಆಗುತ್ತಿದ್ದರೂ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದರು. ಮೂರು ದಿನಗಳ ‌ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ 30 ಜನರ ತಂ...