Bangalore, ಫೆಬ್ರವರಿ 28 -- ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲುಜೆ 2025ನೇ ಸಾಲಿನ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಮಾರ್ಚ್‌ 9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ವರದಿ ಆಧರಿಸಿದ ವಾರ್ಷಿಕ ಪ್ರಶಸ್ತಿಗಳನ್ನು ತಿಂಗಳ ಹಿಂದೆಯೇ ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗಿತ್ತು. ಈಗ ದತ್ತಿನಿಧಿ ಪ್ರಶಸ್ತಿ ಪ್ರಕಟಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ: ಸುಬ್ಬು ಹೊಲೆಯಾರ್ ಹಾಸನ

ಡಿ.ವಿ.ಜಿ.ಪ್ರಶಸ್ತಿ : ರಾಘವೇಂದ್ರ ಗಣಪತಿ, ವಿಜಯವಾಣಿ ಬೆಂಗಳೂರು

ಎಚ್. ಎಸ್. ದೊರೆಸ್ವಾಮಿ ಪ್ರಶಸ್ತ...