Belagavi, ಜನವರಿ 26 -- ಬೆಳಗಾವಿ: ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಂದ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭಾನುವಾರ ಬಿಡುಗಡೆ ಮಾಡಲಾಯಿತು. ಎರಡು ವಾರದ ಹಿಂದೆ ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಬಳಿ ಕಾರು ಅಪಘಾತವಾಗಿ ಬೆನ್ನಿಗೆ ಏಟು ಬಿದ್ದಿದ್ದರಿಂದ ಗಾಯಗೊಂಡು ಲಕ್ಷ್ಮಿ ಹೆಬ್ಬಾಳಕರ್‌ ಚಿಕಿತ್ಸೆ ಪಡೆಯುತ್ತಿದ್ದರು. ಎರಡು ವಾರ ಆಸ್ಪತ್ರೆಯಲ್ಲಿ ಇರಬೇಕು ಎನ್ನುವ ಸೂಚನೆಯಂತೆ ಅವರು ಅಲ್ಲಿಯೇ ಚಿಕಿತ್ಸೆ ಪಡೆದು ಮನೆಗೆ ವಾಪಾಸಾದರು. ಇನ್ನೂ ಕೆಲ ದಿನಗಳ ಕಾಲ ಅವರು ವಿರಾಮದಲ್ಲಿಯೇ ಇರಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್‌ ಅವರು ಗಣರಾಜ್ಯೋತ್ಸವದಲ್ಲೂ ಭಾಗಿಯಾಗಲಿಲ್ಲ.

ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು ನನಗೆ ಪುನರ್ಜನ್ಮ ಬಂದಂತಾಗಿದೆ. ವೈದ್ಯರು ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಆದರೆ, ಸಚಿವೆಯಾಗಿ ನನಗೂ ಜವಾಬ್ದಾರಿ ಇದೆ. ಮಾರ...