ಭಾರತ, ಏಪ್ರಿಲ್ 11 -- ಶಿವಮೊಗ್ಗ: ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ (KS Eshwarappa) ನಾಳೆ (ಏಪ್ರಿಲ್ 12, ಶುಕ್ರವಾರ) ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ (Shivamogga lok sabha Constituency) ನಾಮಪತ್ರ ಸಲ್ಲಿಸಲಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಒತ್ತಿ ಹೇಳಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಈಶ್ವರಪ್ಪ, "ನಾನು ನಾಳೆ ನಾಮಪತ್ರ ಸಲ್ಲಿಸುತ್ತೇನೆ, ಮತ್ತು ನನ್ನ ಬೆಂಬಲಿಗರು ನನ್ನೊಂದಿಗೆ ರ‍್ಯಾಲಿಯಲ್ಲಿ ಬರುತ್ತಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ಅಂತಹ ಅಗಾಧ ಪ್ರತಿಕ್ರಿಯೆಯನ್ನು ಪಡೆಯುವ ಬಗ್ಗೆ ನನಗೆ ಖಚಿತವಿಲ್ಲ, ಆದರೆ ಜನರು ನನ್ನಂತಹ ಹಿಂದುತ್ವ ಅಭ್ಯರ್ಥಿಗಳನ್ನು ಹುಡುಕುತ್ತಿದ್ದಾರೆ ಎಂದು ನಾನು ಅರಿತುಕೊಂಡೆ" ಎಂದು ಹೇಳಿದ್ದಾರೆ.

ಶಿವಮೊಗ್ಗ ಭಾಗದಲ್ಲಿ ತಮಗೆ ಅನೇಕ ಹಿಂದುತ್ವ ನಾಯಕರ ಬೆಂಬಲವಿದೆ ಎಂದು ಹೇಳಿಕೊಂಡಿರುವ ಈಶ್ವರಪ್ಪ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿ...