Bangalore, ಮಾರ್ಚ್ 3 -- ಹಿರಿಯ ನಾಯಕರು, ಕೇಂದ್ರದ ಸಚಿವರ ಹೆಸರುಗಳಿವೆ. ಆದರೆ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಒಬ್ಬರೇ ಹೆಸರನ್ನು ಘೋಷಿಸಿಲ್ಲ. ಅದರಲ್ಲೂ ಕೇಂದ್ರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಆರು ಸಂಸದರಿದ್ದು, ಅವರಲ್ಲಿ ರಾಜೀವ್‌ ಚಂದ್ರಶೇಖರ್‌ ಒಬ್ಬರ ಹೆಸರು ಕೇರಳದ ತಿರುವನಂತಪುರಂ ಕ್ಷೇತ್ರಕ್ಕೆ ಘೋಷಣೆಯಾಗಿದೆ. ಕರ್ನಾಟಕಕ್ಕೆ ಮಾತ್ರ ಒಬ್ಬರ ಹೆಸರನ್ನು ಘೋಷಿಸಿಲ್ಲ. ಇದು ಬಿಜೆಪಿ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ.

ಅದರಲ್ಲೂ ಕೇಂದ್ರದಲ್ಲಿ ಸಚಿವರಾಗಿರುವ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಎ. ನಾರಾಯಣಸ್ವಾಮಿ ಅವರಲ್ಲಿ ಇಬ್ಬರ ಹೆಸರಾದರೂ ಘೋಷಣೆಯಾಗಬಹುದು ಎನ್ನುವ ಲೆಕ್ಕಾಚಾರಗಳಿದ್ದವು. ಒಂದೇ ಒಂದು ಹೆಸರನ್ನೂ ವರಿಷ್ಠರು ಪರಿಗಣಿಸಿಲ್ಲ. ಇದಕ್ಕೆ ಹತ್ತಾರು ಕಾರಣಗಳನ್ನು ಬಿಜೆಪಿ ಕರ್ನಾಟಕದ ಮುಖಂಡರು ವ್ಯಾಖ್ಯಾನಿಸುತ್ತಿದ್ದಾರೆ.

ಈ ಬೆಳವಣಿಗೆ ಮೈತ್ರಿ ಪಕ್ಷ ಜೆಡಿಎಸ್‌ಗೂ ಅಚ್ಚರಿ ಮೂಡಿಸಿದೆ. ಮತ್ತೊಂದು ಕಡೆ ಈ ಬೆಳವಣಿಗೆಗಳನ್ನು ಕಾಂಗ್ರೆಸ್‌ ಎಚ್ಚರಿಕೆಯಿಂದಲೇ ಗಮನಿಸುತ...