ಬೆಂಗಳೂರು,Bengaluru, ಮಾರ್ಚ್ 6 -- Lokayukta Raids: ಬೆಂಗಳೂರು ಸೇರಿದಂತೆ ರಾಜ್ಯದ 8 ಭಾಗಗಳಲ್ಲಿ ಲೋಕಾಯುಕ್ತ ಪೊಲೀಸರು ಇಂದು (ಮಾರ್ಚ್‌ 6) ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಎರಡು ಕಡೆ, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ದಾಳಿ ನಡೆದಿದೆ.

ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ ಗ್ರೂಪ್ ಎ ಮುಖ್ಯ ಎಂಜಿನಿಯರ್ ಆಗಿರುವ ಟಿ.ಡಿ ನಂಜುಂಡಪ್ಪ ಮತ್ತು ಗುಣಮಟ್ಟ ನಿಯಂತ್ರಣ ಮತ್ತು ಗುಣಮಟ್ಟ ಭರವಸೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆದ್ದಾರಿ ಗ್ರೇಡ್-1 ಎಂಜಿನಿಯರ್ ಆಗಿರುವ ಎಚ್.ಬಿ ಕಳೇಶಪ್ಪ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದ್ದು, ತಪಾಸಣೆ ನಡೆದಿದೆ.

ಕೋಲಾರದ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ. ನಾಗರಾಜ್, ದಾವಣಗೆರೆಯ ಆರೋಗ್ಯ ಇಲಾಖೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಘಟಕದ ಜಿಲ್ಲಾ ಸಂಖ್ಯಾಶಾಸ್ತ್ರೀಯ ಅಧಿಕಾರಿ ಜಿ. ಎಸ್. ನಾಗರಾಜು, ತುಮಕೂರಿನ ತಾವರಕೆರೆ...