Prayag raj, ಜನವರಿ 30 -- Maha Kumbh Mela 2025: ಉತ್ತರ ಪ್ರದೇಶದ ತ್ರಿವೇಣಿ ಸಂಗಮ ನಗರ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30ಭಕ್ತರು ಮೃತಪಟ್ಟು 60 ಮಂದಿ ತೀವ್ರವಾಗಿ ಗಾಯಗೊಂಡ ಪ್ರಕರಣದ ಬೆನ್ನಲ್ಲೇ ಕುಂಭಮೇಳದ ನಿರ್ವಹಣೆಯಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಮುಖ್ಯವಾಗಿ ಐದು ಬದಲಾವಣೆಗಳನ್ನು ಮಹಾಕುಂಭಮೇಳ ಸಮಿತಿಯು ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗು ಹಿರಿಯ ಸಚಿವರು, ಅಧಿಕಾರಿಗಳ ಸೂಚನೆಯ ಹಿನ್ನೆಲೆಯಲ್ಲಿ ಇನ್ನೂ ಒಂದು ತಿಂಗಳ ಕಾಲ ನಡೆಯಲಿರುವ ಮಹಾಕುಂಭಮೇಳದಲ್ಲಿ ಬದಲಾವಣೆ ಮಾಡಲಾಗಿದೆ. ಇದರಿಂದ ಮುಂದೆ ಇಂತಹ ಅನಾಹುತ ಆಗದಂತೆ ಮುನ್ನೆಚ್ಚರಿಕೆಯನ್ನು ಕೈಗೊಳ್ಳಲಾಗಿದೆ. ಗುರುವಾರದಿಂದಲೇ ಹೊಸ ನಿಯಮಗಳು ಜಾರಿಗೆ ಬಂದಿವೆ.

Published by HT Digital Content Services with permission from HT Kannada....