ಭಾರತ, ಜನವರಿ 29 -- ಉತ್ತರಪ್ರದೇಶ: ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾ ಕುಂಭ ಮೇಳದಲ್ಲಿ ಇಂದು ಮುಂಜಾನೆ (ಜನವರಿ 29, ಬುಧವಾರ) ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 15ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನ ಮಾಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಕಾರಣ ಕಾಲ್ತುಳಿತ ಉಂಟಾದ ಹಿನ್ನೆಲೆ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.

ಸಂಗಮ್‌ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್​ಗಳನ್ನು ಮುರಿದು ಪುಣ್ಯ ಸ್ನಾನಕ್ಕೆ ಭಕ್ತರು ನುಗ್ಗಿದ ಪರಿಣಾಮ ಅಪಾರ ಸಾವು-ನೋವುಗಳಿಗೆ ಕಾರಣವಾಗಿದೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ಅಧಿಕಾರಿ ಆಕಾಂಕ್ಷಾ ರಾಣಾ ಅವರು ಪಿಟಿಐಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಕಾಲ್ತುಳಿತದಲ್ಲಿ ಇಲ್ಲಿಯವರೆಗೆ 15 ಜನರು ಸಾವನ್ನಪ್ಪಿದ್ದಾರೆ ಎಂದು ವೈದ್ಯರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಕನಿಷ್ಠ 14 ಮೃತದೇಹಗಳನ್ನು ಸ್ವರೂಪ್ ರಾಣಿ ವೈದ್...