ಭಾರತ, ಏಪ್ರಿಲ್ 5 -- ಮಹಾರಾಷ್ಟ್ರ: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಶುಕ್ರವಾರ (ಏಪ್ರಿಲ್ 4) ಬೆಳಿಗ್ಗೆ ಕೃಷಿ ಭೂಮಿಗೆ ಕೆಲಸಗಾರರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿ ಬಾವಿಗೆ ಬಿದ್ದ ಪರಿಣಾಮ ಏಳು ಮಹಿಳಾ ಕೃಷಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇತರ ಮೂವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲಿಂಬ್ಗಾಂವ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಅಸೆಗಾಂವ್ ಗ್ರಾಮದಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ವಾಹನವು ರಸ್ತೆಯಿಂದ ಜಾರಿ ನೀರಿನಿಂದ ತುಂಬಿದ ಬಾವಿಗೆ ಬಿದ್ದಿದೆ ಎಂದು ಜಿಲ್ಲಾ ಮಾಹಿತಿ ಅಧಿಕಾರಿ (ಡಿಐಒ) ಪ್ರವೀಣ್ ಟೇಕ್ ತಿಳಿಸಿದ್ದಾರೆ.

ಪೊಲೀಸರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಬಾವಿಯಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಹಾಕಿದರು ಎಂದು ಹೇಳಲಾಗಿದೆ. ಕಾರ್ಯಾಚರಣೆಯ ಕೊನೆಯಲ್ಲಿ, ಏಳು ಮಹಿಳೆಯರ ಶವಗಳನ್ನು ಬಾವಿಯಿಂದ ಹೊರತೆಗೆಯಲಾಗಿದ್ದು, ಇತರ ಮೂವರನ್ನು ರಕ್ಷಿಸಲಾಗಿದೆ ಎಂದು ಡಿಐಒ ತಿಳಿಸ...