Bangalore, ಮಾರ್ಚ್ 14 -- ಬೆಂಗಳೂರು: ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗುರುವಾರ ತಿಳಿಸಿದೆ. ಅವರನ್ನು ಕೋಲ್ಕತಾದ ಸರ್ಕಾರಿ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. "69 ವರ್ಷದ ರಾಜಕಾರಣಿ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೋಲ್ಕತ್ತಾದ ಬಾಲಿಗಂಜ್‌ನಲ್ಲಿ ನಡೆದ ಕಾರ್ಯಕ್ರಮದಿಂದ ಹಿಂತುರುಗಿದ ಬಳಿಕ ತಮ್ಮ ಮನೆಯಲ್ಲಿ ಜಾರಿಬಿದ್ದಿದ್ದಾರೆ. ಇದರಿಂದ ಹಣೆಗೆ ಗಾಯವಾಗಿದೆ" ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಟಿಎಂಸಿಯು ಮಮತಾ ಬ್ಯಾನರ್ಜಿ ಅವರ ಕೆಲವು ಚಿತ್ರಗಳನ್ನು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಈ ಫೋಟೋಗಳಲ್ಲಿ ಮಮತಾ ಬ್ಯಾನರ್ಜಿ ಹಣೆಯಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಕಾಣಬಹುದು. "ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿಗೆ ದೊಡ್ಡ ಗಾಯವಾಗಿದೆ. ಅವರಿಗಾಗಿ ಪ್ರಾರ್ಥನೆ ಮಾಡಿದೆ" ಎಂದು ಟಿಎಂಸಿ ಟ್ವೀಟ್‌ ಮಾಡಿದೆ.

ಮಮತಾ ಬ್ಯಾನರ್ಜಿ ಆರೋಗ್ಯ ...