Mandya, ಜನವರಿ 30 -- ಬೆಂಗಳೂರು: ಕಳೆದ ವರ್ಷದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದ ಮಂಡ್ಯದ ಕೃಷಿ ವಿಶ್ವವಿದ್ಯಾನಿಲಯಕ್ಕೆ ಅಧಿಕೃತವಾಗಿ ಅನುಮತಿ ನೀಡಲಾಗಿದ್ದು, ಸರ್ಕಾರಿ ಆದೇಶ ಹೊರ ಬಿದ್ದಿದೆ. ಮಂಡ್ಯ ಜಿಲ್ಲೆ, ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ಹಾಸನ ಸಹಿತ ಈ ಭಾಗದ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಕೃಷಿ ಹಾಗೂ ತೋಟಗಾರಿಕೆ ಸಂಸ್ಥೆಗಳು ಮಂಡ್ಯ ಕೃಷಿ ವಿವಿ ವ್ಯಾಪ್ತಿಗೆ ಬರಲಿವೆ.

2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ ಪ್ರಾರಂಭಕ್ಕೆ ಆದೇಶ ಹೊರಬಿದ್ದಿದೆ....