Mangalore, ಫೆಬ್ರವರಿ 25 -- Mangalore Bank Robbery: ಈ ವರ್ಷದ ಆರಂಭದಲ್ಲಿ ಕರ್ನಾಟಕ ರಾಜ್ಯವಲ್ಲದೇ ದೇಶದ ಗಮನ ಸೆಳೆದ ಬ್ಯಾಂಕ್ ದರೋಡೆ ಪ್ರಕರಣವಾಗಿರುವ ಮಂಗಳೂರು ಹೊರವಲಯದ ಕೋಟೆಕಾರು ಸೇವಾ ಸಹಕಾರಿ ಸಂಘದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ತನಿಖಾ ತಂಡ ಬಂಧಿಸಿದೆ. ಜನವರಿ 17ರಂದು ಘಟನೆ ನಡೆದಿದ್ದು, ಈಗಾಗಲೇ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿಸಿದ ಪೊಲೀಸರು ಪ್ರಮುಖ ಆರೋಪಿಯಾದ ಭಾಸ್ಕರ್ ಬೆಳ್ಚಪ್ಪಾಡ ಮತ್ತು ಮಹಮ್ಮದ್ ನಝೀರ್ ಅವರನ್ನು ಬಂಧಿಸಲಾಗಿದೆ. ಬಂಧಿತ ಇಬ್ಬರಿಂದ ಘಟನೆ ಕುರಿತು ವಿಸ್ತೃತ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸರು ತಿಳಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ದಲ್ಲಿ ದರೋಡೆ ಪ್ರಕರಣವನ್ನು ಪತ್ತೆಹಚ್ಚಿ ಆರೋಪಿಗಳು ದರೋಡೆ ಗೈದ ಚಿನ್ನಾಭರಣಗಳು ಮತ್ತು ನಗದು ಹಣವನ್ನು ವಶಪಡಿಸಿಕೊಂಡಿದ್ದು ಪ್ರಕರಣದಲ್ಲಿ ಈಗಾಗಲೇ ನಾಲ್...