ಭಾರತ, ಮಾರ್ಚ್ 16 -- Mangalore Crime: ಅಪಾರ್ಟ್ಮೆಂಟ್ ನಿಂದ ಬಿದ್ದು ಬಾಲಕ ಮೃತಪಟ್ಟ ಘಟನೆ ಮಂಗಳೂರಿನ ನಗರದ ಮೇರಿಹಿಲ್ ನಲ್ಲಿ ನಡೆದಿದೆ. ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಸಮರ್ಜಿತ್ (12) ಮೃತ ಬಾಲಕ.‌ ಶನಿವಾರ ಮುಂಜಾನೆ ಯಾವುದೋ ಕಾರಣಕ್ಕೆ ಸ್ನೇಹಿತರೊಂದಿಗೆ ವಸತಿ ಸಮುಚ್ಚಯದ 5ನೇ ಮಹಡಿಗೆ ತೆರಳಿದ್ದು, ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು‌ ಮೃತಪಟ್ಟಿದ್ದಾನೆ.

ಶನಿವಾರ ಮುಂಜಾನೆ 5.30 ರಿಂದ 6.50ರ ನಡುವೆ ಈ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದ ಪರಿಣಾಮ ಸಮರ್ಜಿತ್ ನ ತಲೆ ಮತ್ತು ಬೆನ್ನು ಮೂಳೆಗೆ ತೀವ್ರ ಪೆಟ್ಟು ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬೆಳಿಗ್ಗೆ 7 ರ ವೇಳೆಗೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮರ್ಜಿತ್ ಕುಟುಂಬದವರೊಂದಿಗೆ 2ನೇ ಮಹಡಿಯಲ್ಲಿ ವಾಸವಾಗಿದ್ದರು. ಈತ ಚುರುಕ...