ಭಾರತ, ಮಾರ್ಚ್ 6 -- Mangalore Food Poison: ಮಂಗಳೂರು ಸೆಂಟ್ರಲ್ ಜೈಲ್‌ನಲ್ಲಿ ಬುಧವಾರ (ಮಾರ್ಚ್ 5) ಸುಮಾರು 45 ಕೈದಿಗಳು ಫುಡ್ ಪಾಯ್ಸನ್‌ನಿಂದ ತೊಂದರೆಗೊಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಮತ್ತೆ ಜೈಲಿಗೆ ಹೋಗಿದ್ದಾರೆ. ಒಟ್ಟು 55 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಫುಡ್ ಪಾಯ್ಸನ್ ಆಗಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ಕೈದಿಗಳನ್ನು ಬಂಧೀಖಾನೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ವೆನ್ಲಾಕ್ ಆಸ್ಪತ್ರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಚಿಕಿತ್ಸೆ ಬಗ್ಗೆ ವೈದ್ಯರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ, ಒಟ್ಟು 55 ಮಂದಿ ಕೈದಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ ಹನ್ನೊಂದು ಮಂದಿ ಗುಣ ಹೊಂದಿದ್ದಾರೆ. ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಮತ್ತೆ ಹತ್ತು ಮಂದಿಯನ್ನು ಅಸ್ವಸ್ಥರಾದ ಕಾರಣಕ್ಕೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎನ್ನಲಾಗಿದೆ. ಬುಧವಾರ ಸಂಜೆ ಪೊಲೀ...