Mangaluru,ಮಂಗಳೂರು, ಮೇ 6 -- ಮಂಗಳೂರು: ನೇತ್ರಾವತಿ ನದಿಯ ಪಕ್ಕ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಭಾನುವಾರ ಬಂಟ್ವಾಳ ಸಮೀಪ ನಡೆದಿದೆ. ಇನ್ನೊಂದು ಘಟನೆಯಲ್ಲಿ ಉಳ್ಳಾಲದಲ್ಲಿ ಕಡಲವಿಹಾರಕ್ಕೆ ಬಂದ ಮೈಸೂರಿನ ಪ್ರವಾಸಿಗರಲ್ಲಿ ಒಬ್ಬ ನೀರುಪಾಲಾಗಿದ್ದು ಆತನನ್ನು ಜೀವರಕ್ಷಕರು ರಕ್ಷಿಸಿದ್ದಾರೆ.

ನೇತ್ರಾವತಿ ನದಿ ಬದಿಯಲ್ಲಿ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಮುಳುಗಿ ನೀರುಪಾಲಾದ ಘಟನೆ ಭಾನುವಾರ ಸಂಜೆ ದಕ್ಣಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ನಾವೂರ ಎಂಬಲ್ಲಿ ನಡೆದಿದೆ.

ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 ) ಮೃತರಾದ ಬಾಲಕಿಯರು. ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿದ್ದರು. ಇವತ್ತು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿ ಬದಿ ತೆರ...