ಭಾರತ, ಫೆಬ್ರವರಿ 27 -- ಮಂಗಳೂರು: ನಗರದ ಹೊರವಲಯದ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬುವವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಿಗ್ಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ ಪ್ರತಿಭಟನಕಾರರು ಮುಂದಿನ 24 ಗಂಟೆಯ ಒಳಗಾಗಿ ಬಾಲಕನನ್ನು ಪತ್ತೆ ಮಾಡಬೇಕು. ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಅವರ ಜೊತೆಗೂ ಪ್ರತಿಭಟನಕಾರರು ಮಾತುಕತೆ ನಡೆಸಿದರು.

ಬಳಿಕ ಫರಂಗಿಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿ ಮಾರ್ಚ್‌ 1 ರ ಶನಿವಾರ ಮುಂಜಾನೆಯಿಂದ ಫರಂಗಿಪೇಟೆಯ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲು ತೀರ್ಮಾನಿಸಿದರು. ಈ ಪ್ರತಿಭಟನೆಯು ಯಶಸ್ವಿಯಾಗಲು ಎಲ್ಲ ಸಂಘ-ಸಂಸ್ಥೆಗಳು, ಸ್ಥಳೀಯ ಆರು ಗ...