ಭಾರತ, ನವೆಂಬರ್ 25 -- ನವದೆಹಲಿ: ದೆಹಲಿಯ ಆಡಳಿತಾರೂಢ ಆಮ್‌ ಆದ್ಮಿ ಪಕ್ಷ(ಆಪ್)‌ ಹಾಗೂ ಕೇಂದ್ರದಲ್ಲಿ ಆಡಳಿತದಲ್ಲಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ನಡುವಿನ ರಾಜಕೀಯ ಜಟಾಪಟಿ ತನ್ನ ಪರಾಕಾಷ್ಠೆಯನ್ನು ತಲುಪಿದೆ. ಗುಜರಾತ್‌ ವಿಧಾನಸಭೆ ಚುನಾವಣೆ ಹಾಗೂ ದೆಹಲಿ ಪಾಲಿಕೆ(ಎಂಸಿಡಿ) ಚುನಾವಣೆ ಹಿನ್ನೆಲೆಯಲ್ಲಿ , ಉಭಯ ಪಕ್ಷಗಳು ಮಾಡುತ್ತಿರುವ ಪರಸ್ಪರ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತವನ್ನು ತಲುಪಿದೆ.

ಗುಜರಾತ್ ಮತ್ತು ಎಂಸಿಡಿ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ, ಬಿಜೆಪಿಯು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲೆ ಮಾಡು ಸಂಚು ರೂಪಿಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮನೀಶ್‌ ಸಿಸೋಡಿಯಾ, ಕೇಜ್ರಿವಾಲ್‌ ಅವರನ್ನು ಕೊಲ್ಲುವ ಸಂಚಿನಲ್ಲಿ ದೆಹಲಿಯ ಬಿಜೆಪಿ ಸಂಸದ ಮನೋಜ್ ತಿವಾರಿ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಆಪ್‌ ಮತ್ತು ಕೇಜ್ರಿವಾಲ್‌ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್...