Bengaluru, ಫೆಬ್ರವರಿ 27 -- ಕಿಚ್ಚ ಸುದೀಪ್ ನಟಿಸಿರುವ ಮ್ಯಾಕ್ಸ್ ಚಿತ್ರಕ್ಕೆ ವಿಜಯ್ ಕಾರ್ತಿಕೇಯನ್ ಆಕ್ಷನ್ ಕಟ್ ಹೇಳಿದ್ದಾರೆ. ಮಾಸ್ ಮತ್ತು ಕ್ಲಾಸ್ ಪ್ರೇಕ್ಷಕರಿಗಾಗಿ ಮಾಡಿರುವ ಈ ಸಿನಿಮಾವನ್ನು ಸ್ವತಃ ಕಿಚ್ಚ ಸುದೀಪ್ ಮತ್ತು ಕಲೈಪುಲಿ ಧಾನು ನಿರ್ಮಿಸಿದ್ದಾರೆ.
ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಶೇಖರ್ ಚಂದ್ರ ಅವರ ಛಾಯಾಗ್ರಹಣ ಈ ಚಿತ್ರದ ಮತ್ತೊಂದು ಪ್ಲಸ್ ಪಾಯಿಂಟ್. ಸಕ್ಕತ್ ಆಕ್ಷನ್, ಖಡಕ್ ಡೈಲಾಗ್, ಮತ್ತು ಹಾಡುಗಳ ಮೂಲಕ ಪ್ರೇಕ್ಷಕರನ್ನು ಅತ್ತಿತ್ತ ಕದಲದಂತೆ ಸೀಟಿನ ತುದಿಗೆ ತಂದು ಕೂರಿಸಿತ್ತು ಈ ಸಿನಿಮಾ.
ಕಿಚ್ಚ ಸುದೀಪ್ ಜತೆಗೆ ಟಾಲಿವುಡ್ ನಟ ಸುನಿಲ್, ವರಲಕ್ಷ್ಮಿ ಶರತ್ ಕುಮಾರ್, ಉಗ್ರಂ ಮಂಜು, ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಳೆ, ವಿಜಯ್ ಚಂಡೂರು ಮುಂತಾದ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಜೀ ಕನ್ನಡದಲ್ಲಿ ಫೆಬ್ರವರಿ 15ರ ರಾತ್ರಿ 7:30ಕ್ಕೆ ಜೀ ಕನ್ನಡದಲ್ಲಿ ಮ್ಯಾಕ್ಸ್ ಸಿನಿಮಾ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಿತ್ತು. ಇದೀಗ ಇದೇ ಚಿತ್ರದ ಟಿಆರ್ಪಿ ರೇಟಿಂಗ್ ಹೊರಬಿದ್ದಿದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.