ಭಾರತ, ಫೆಬ್ರವರಿ 14 -- Max Television Premiere: ಕನ್ನಡ ಕಿರುತೆರೆಯ ಪ್ರಮುಖ ಮನರಂಜನಾ ವಾಹಿನಿ, ಜೀ ಕನ್ನಡ ಬರೀ ಧಾರಾವಾಹಿಗಳಿಂದ ಮಾತ್ರವಲ್ಲದೇ, ರಿಯಾಲಿಟಿ ಶೋಗಳು, ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ಗಳಿಂದಲೂ ಪ್ರೇಕ್ಷಕರ ಮನಗೆದ್ದು ನಂ.1 ಪಟ್ಟದಲ್ಲಿದೆ. ಅಷ್ಟೇ ಅಲ್ಲದೇ ಈಗ ಜೀಕನ್ನಡ ವಾಹಿನಿಯು ಪ್ರೇಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್ ಕೊಡಲು ಮುಂದಾಗಿದೆ. ನಟ ಕಿಚ್ಚ ಸುದೀಪ್ ನಟಿಸಿರುವ ಬ್ಲಾಕ್‌ ಬಸ್ಟರ್‌ ಸಿನಿಮಾ ಮ್ಯಾಕ್ಸ್ ಇದೇ ಫೆಬ್ರವರಿ 15 ರಂದು 7:30 ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಕಿಚ್ಚ ಸುದೀಪ್ ಮ್ಯಾಕ್ಸ್ ಆಗಿ ನಟಿಸಿರುವ ಈ ಚಿತ್ರಕ್ಕೆ ವಿಜಯ್ ಕಾರ್ತಿಕೇಯನ್ ಆಕ್ಷನ್ ಕಟ್ ಹೇಳಿದ್ದಾರೆ. ಮಾಸ್ ಮತ್ತು ಕ್ಲಾಸ್ ಪ್ರೇಕ್ಷಕರಿಗಾಗಿ ಮಾಡಿರುವ ಈ ಸಿನಿಮಾವನ್ನು ಸ್ವತಃ ಕಿಚ್ಚ ಸುದೀಪ್ ಮತ್ತು ಕಲೈಪುಲಿ ಧಾನು ನಿರ್ಮಿಸಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಶೇಖರ್ ಚಂದ್ರ ಅವರ ಛಾಯಾಗ್ರಹಣ ಈ ಚಿತ್ರದ ಮತ್ತೊಂದು ಪ್ಲಸ್ ಪಾಯಿಂಟ್. ಸಕ್ಕತ್ ಆಕ್ಷನ್, ಖಡಕ್ ಡೈಲಾಗ್, ಮತ್ತು ಹಾಡು...