ಭಾರತ, ಏಪ್ರಿಲ್ 8 -- ವಿಶ್ವವಿಖ್ಯಾತ, ಐತಿಹಾಸಿಕ ಮೇಲುಕೋಟೆ ಕ್ಷೇತ್ರದ ಶ್ರೀ ಚೆಲುವನಾರಾಯಣಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಶ್ವಾವಸು ಸಂವತ್ಸರದ ಚೈತ್ರ ಮಾಸದ ಪುಷ್ಯ ನಕ್ಷತ್ರದ ಶುಭ ದಿನದಂದು ವಜ್ರಖಚಿತ ವೈರಮುಡಿ ಧರಿಸಿದ್ದ ಚೆಲುವನಾರಾಯಣಸ್ವಾಮಿಯು ದೇವಾಲಯದಿಂದ ಹೊರ ಬರುತ್ತಿದ್ದಂತೆ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

. ಗಂಡ-ಭೇರುಂಡ ಸ್ವರೂಪಿ ಚಂದ್ರಪ್ರಭೆ ಪ್ರಭಾವಳಿಯ ಮಧ್ಯದಲ್ಲಿ ಅಲಂಕಾರ ಸ್ವರೂಪಿಯಾಗಿದ್ದ ಸ್ವಾಮಿಯ ಉತ್ಸವವನ್ನು ನೋಡಿ ಭಕ್ತರು ದರ್ಶನ ಪಡೆದು ಸಂಭ್ರಮಿಸಿದರು.

ರಾಮಾನುಜಾಚಾರ್ಯರ ಸನ್ನಿಧಿಯಲ್ಲಿ ಪ್ರಥಮ ಪೂಜೆ ಸಲ್ಲಿಸಿದ ನಂತರ ವೈರಮುಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವ ಸಾಗುವ ರಾಜಬೀದಿಯನ್ನು ತಳಿರು-ತೋರಣ, ವಿಶೇಷ ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು.

ಚೆಲುವನಾರಾಯಣಸ್ವಾಮಿಯು ದೇವಾಲಯದಿಂದ ಹೊರ ಬರುತ್ತಿದ್ದಂತೆ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು ಗೋವಿಂದ, ಗೋವಿಂದ ಎಂಬ ಜಯಘೋಷಗಳನ್ನು ಮೊಳಗಿಸಿದರು ...