Melkote, ಏಪ್ರಿಲ್ 6 -- Melkote Vairamudi 2025: ಮಂಡ್ಯ ಜಿಲ್ಲೆಯ ಐತಿಹಾಸಿಕ ಹಾಗೂ ಧಾರ್ಮಿಕ ಪ್ರವಾಸ ತಾಣವಾದ ವಿಶ್ವವಿಖ್ಯಾತ ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇವಾಲಯದಲ್ಲಿ ಏಪ್ರಿಲ್ 7 ರಂದು ಶ್ರೀ ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ ವೈರಮುಡಿ ಬ್ರಹ್ಮೋತ್ಸವದ ಅಂಗವಾಗಿ ಏ.2 ರಿಂದ ವೈರಮುಡಿ ಬ್ರಹೋತ್ಸವ ಪ್ರಾರಂಭವಾಗಿದ್ದು, ಏ.14 ರವರೆಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನೆರವೇರಲಿದೆ. ಈ ಮೊದಲು ಮೇಲುಕೋಟೆ ಉತ್ಸವದ ಸಂದರ್ಭದಲ್ಲಿ ಬಾಡಿಗೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿತ್ತು. ಪ್ರಸಕ್ತ ಸಾಲಿನಿಂದ ಮೇಲುಕೋಟೆ ಸುತ್ತಾ ಮುತ್ತ ಶಾಶ್ವತವಾಗಿ 19 ಲಕ್ಷ ರೂ. ವೆಚ್ಚದಲ್ಲಿ 40 ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಪ್ರಮುಖ ಪ್ರವಾಸಿ ತಾಣದಲ್ಲಿ ಭದ್ರತೆಗೆ ಹೆಚ್ಚಿನ ಒತ್ತು ಸಿಕ್ಕಂತಾಗಿದೆ.
ಮೇಲುಕೋಟೆ ಕ್ಷೇತ್ರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇಲುಕೋಟೆ ವೈರಮುಡಿ ಉತ್ಸವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. 5 ಡಿವೈಎಸ್ಪಿ, 34 ಸಿಪ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.