ಭಾರತ, ಫೆಬ್ರವರಿ 18 -- ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆಯಾಗಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಭಾರತ ಮಾತ್ರವಲ್ಲದೆ ವಿಶ್ವದೆಲ್ಲೆಡೆ ಮೆಟ್ರೋ ರೈಲು ಪ್ರಯಾಣ ಸಾಮಾನ್ಯವಾಗಿ ಅಗ್ಗವಾಗಿರುತ್ತದೆ. ಆದರೆ ನಮ್ಮ ಮೆಟ್ರೋ ಪ್ರಯಾಣವು ಭಾರತದಲ್ಲೇ ಅತ್ಯಂತ ದುಬಾರಿ ಎನಿಸಿದೆ. ಪ್ರಯಾಣ ದರವನ್ನು ಏರಿಕೆ ಮಾಡಿರುವ ಬೆನ್ನಲ್ಲೇ, ನಮ್ಮ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಇದೇ ವೇಳೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಳವಾಗಿದೆ. ಇದಕ್ಕೆ ಕಾರಣವೂ ಇದೆ.

ನಮ್ಮ ಮೆಟ್ರೋ ಪ್ರಯಾಣಿಕರು ನಗರದ ಬಿಎಂಟಿಸಿ ಎಸಿ ಬಸ್ ಪ್ರಯಾಣಿಕರು ವಾರ್ಷಿಕವಾಗಿ ಮಾಡುವ ವೆಚ್ಚಕ್ಕಿಂತ ಎರಡು ಪಟ್ಟು ಹೆಚ್ಚು ಹಣವನ್ನು ಮೆಟ್ರೋ ಪ್ರಯಾಣಕ್ಕಾಗಿ ವ್ಯಯಿಸುತ್ತಿದ್ದಾರೆ. ಬಸ್‌ ಪ್ರಯಾಣವು ಅಗ್ಗವಾಗಿದ್ದು, ಜನರು ಅದರತ್ತ ಒಲವು ತೋರಿಸುತ್ತಿದ್ದಾರೆ.

ಮೆಟ್ರೋ ಪ್ರಯಾಣ ದರ ಏರಿಸಿದ ನಂತರ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಹಲವರು ಬಿಎಂಟಿಸಿ ಬಸ್‌ ಅ...