Bangalore, ಜನವರಿ 30 -- ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಮೈಕ್ರೊ ಫೈನಾನ್ಸ್‌ ಕಿರುಕುಳಕ್ಕೆ ಹಲವರು ಆತ್ಮಹತ್ಯೆಗೆ ಶರಣಾಗಿ, ಮನೆ ತೊರೆದು ಹೋಗಿರುವ ಘಟನೆಗಳು ಹೆಚ್ಚಿರುವ ನಡುವೆಯೇ ಮೈಕ್ರೋಫೈನಾನ್ಸ್‌ನವರ ಬೆದರಿಕೆ, ದಬ್ಬಾಳಿಕೆಗೆ ಕಡಿವಾಣ ಹಾಕಲು ಕೊನೆಗೂ ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಗಟ್ಟಿಯಾದ ಕಾನೂನು ರೂಪಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಸಂಪುಟ ಸಭೆ ಸಂಪೂರ್ಣ ಅಧಿಕಾರ ನೀಡಿದೆ. ಗುರುವಾರ ಸಂಜೆಯೇ ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರೊಂದಿಗೆ ಸಭೆ ನಡೆಯಲಿದ್ದು, ಕಾನೂನಿ ಸ್ವರೂಪ, ಸುಗ್ರಿವಾಜ್ಞೆ ಕುರಿತು ಅಂತಿಮ ತೀರ್ಮಾನವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹಾಗೂ ತಡೆ ಕುರಿತಾಗಿಯೇ ಮಹತ್ವದ ಚರ್ಚೆ ನಡೆಯಿತು. ಕಿರುಕುಳ ತಡೆದು ಜನ ನಿರುಮ್ಮಳ, ಭಯಮುಕ್ತವಾಗಿ...