ಭಾರತ, ಮಾರ್ಚ್ 27 -- ಇಡೀ ಭಾರತದಲ್ಲೇ ಅಮುಲ್‌ ನಂತರ ಗಮನ ಸೆಳೆದಿರುವ ಕರ್ನಾಟಕ ನಂದಿನಿ ಬ್ರಾಂಡ್‌ ಹಾಲು ಹೆಚ್ಚು ಬಳಕೆಯಲ್ಲಿದೆ. ಹಾಲಿನ ದರವನ್ನು ನಿರಂತರವಾಗಿ ಏರಿಕೆ ಮಾಡಲಾಗುತ್ತಲೇ ಇದೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಕೇವಲ 22 ತಿಂಗಳಿನಲ್ಲಿ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂಪಾಯಿಯನ್ನು ಲೀಟರ್‌ಗೆ ಹೆಚ್ಚಿಸಲಾಗಿದೆ.

2023ರ ಆಗಸ್ಟ್ ನಲ್ಲಿ 3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ 2024 ಜೂನ್ ನಲ್ಲಿ 2 ರೂಪಾಯಿ ಏರಿಕೆ ಆಯ್ತು. ಈಗ ಮತ್ತೊಮ್ಮೆ ಏಕಾಏಕಿ 4 ರೂಪಾಯಿ ಹೆಚ್ಚಾಗಿದೆ.

ಒಂದೂವರೆ ವರ್ಷದ ಹಿಂದೆಯೇ ನಂದಿನಿ ಹಾಲು ಹಾಗೂ ಉತ್ಪನ್ನಗಳ ಬೆಲೆ ಏರಿಕೆ ಮಾಡಿದಾಗ ಭಾರೀ ವಿರೋಧ ವ್ಯಕ್ತವಾಗಿತ್ತು.

ಕಳೆದ ವರ್ಷವೂ ಮತ್ತೊಮ್ಮೆ ದರ ಏರಿಕೆ ಮಾಡಿದಾಗಲೂ ಕರ್ನಾಟಕದಲ್ಲಿ ವಿರೋಧವನ್ನು ವ್ಯಕ್ತಪಡಿಸಲಾಗಿತ್ತು.

ಆದರೂ ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿಯೇ ಹಾಲಿನ ದರ ಕಡಿಮೆ ಇದೆ ಎಂದು ಸರ್ಕಾರ ಸಮರ್ಥನೆ ನೀಡಿತ್ತು.

ಇದಾಗಿ ಸುಮಾರು ಎರಡು...