Bangalore, ಮಾರ್ಚ್ 29 -- MSIL in e Commerce:ಸರಕಾರಿ ಸ್ವಾಮ್ಯದ ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್‌ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್‌ ಪೋರ್ಟಲ್‌ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ ಒಡೆತನದ ವಿವಿಧ ಉತ್ಪನ್ನಗಳ ಮಾರಾಟದ ಜತೆಗೆ ಖರೀದಿ ವ್ಯವಸ್ಥೆಗೂ ಇದು ವೇದಿಕೆಯಾಗಲಿದೆ. ಇದರ ಕಾರ್ಯಾಚರಣೆಯನ್ನು ನಾಲ್ಕು ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದು ಕಾರ್ಯರೂಪಕ್ಕೆ ಬಂದರೆ ಸರಕಾರಿ ಇಲಾಖೆಗಳು ಯಾವುದೇ ಟೆಂಡರ್ ಇಲ್ಲದೆ ತಮ್ಮ ಇಲಾಖೆಗೆ ಬೇಕಾಗುವ ಸಾಮಗ್ರಿಗಳನ್ನು ಇದರ ಮೂಲಕವೇ ಖರೀದಿಸಬಹುದು. ಹಾಗೆಯೇ, ಮಾರಾಟ ಕೂಡ ಮಾಡಬಹುದು. ಕೇಂದ್ರ ಸರಕಾರದ ಮಟ್ಟದಲ್ಲಿ ಟೆಂಡರ್ ಇಲ್ಲದೆ ನೇರವಾಗಿ ಖರೀದಿಸಲು ಜೆಮ್ ಪೋರ್ಟಲ್ ಇದ್ದು, ಅದೇ ಮಾದರಿಯಲ್ಲಿ ಇದು ಕೂಡ ಕೆಲಸ ಮಾಡಲಿದೆ

ಈ ಸಂಬಂಧ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಶನಿವಾರ ಎಂಎಸ್‌ಐಎಲ್‌ನ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ವಿಸ್ತೃತವಾಗಿ ಚರ್ಚಿಸಿದರು. ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು,...