ಭಾರತ, ಜನವರಿ 27 -- ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಬಹುದು ಎನ್ನುವ ಚರ್ಚೆಗಳು ನಡೆದಿರುವ ನಡುವೆಯೇ ಸಿದ್ದರಾಮಯ್ಯರ ಪತ್ನಿ ಬಿ.ಎಂ.ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್‌ ಅವರಿಗೆ ನೊಟೀಸ್‌ ಅನ್ನು ನಿರ್ದೇಶನಾಲಯ ಜಾರಿ ಮಾಡಿದೆ. ಅವರು ಇಂದು ಹಾಗೂ ಮಂಗಳವಾರ ವಿಚಾರಣೆಗೆ ಹಾಜರಾಗಬೇಕು ಎನ್ನುವ ಸೂಚನೆಯನ್ನು ನೋಟಿಸ್‌ ಮೂಲಕ ತಿಳಿಸಲಾಗಿದೆ.ಇಡಿ ನೋಟಿಸ್​ ನೀಡುತ್ತಿದ್ದಂತೆ ಸಮನ್ಸ್ ಪ್ರಶ್ನಿಸಿ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್​ ಹೈಕೋರ್ಟ್‌ನ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಳ ವಿಚಾರಣೆಯನ್ನು ಇಂದೇ ನಡೆಸುವಂತೆಯೂ ಇಬ್ಬರ ಪರ ವಕೀಲರು ಮನವಿಯನ್ನು ಮಾಡಿದ್ದಾರೆ.

ನೋಟಿಸ್‌ ಸಂಬಂಧ ತುರ್ತು ವಿಚಾರಣೆ ಕೈಗೆತ್ತಿಕೊಳ್ಳುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದ್ದು, ದಿನದ ಕೊನೆಯಲ್ಲಿ ಈ ಕುರ...