Bangalore, ಏಪ್ರಿಲ್ 2 -- Mysore Sandal Soap: ಮೈಸೂರು ಸ್ಯಾಂಡಲ್‌ ಸೋಪ್‌ ಸಹಿತ ನಾನಾ ಉತ್ಪನ್ನಗಳನ್ನು ತಯಾರಿಸುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, 416 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ 54 ರೂ. ಕೋಟಿ ಹೆಚ್ವು.ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮತ್ತು ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ಸಂಸ್ಥೆಯು 43,144 ಮೆಟ್ರಿಕ್ ಟನ್ ಸಾಬೂನು ಮತ್ತು ಮಾರ್ಜಕಗಳನ್ನು ಮಾರಾಟ ಮಾಡಿ, ದಾಖಲೆಯ ಲಾಭ ಗಳಿಸಿದೆ. ಲಾಭದಲ್ಲಿ ನಿಯಮಾನುಸಾರ ಶೇ.30ರಷ್ಟನ್ನು, ಅಂದರೆ 123 ಕೋಟಿ ರೂ.ಗಳನ್ನು ಸರಕಾರಕ್ಕೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ.

ಸಂಸ್ಥೆಯು 2023-24ರಲ್ಲಿ 37,916 ಟನ್ ಉತ್ಪನ್ನ ಮಾರಾಟ ಮಾಡಿ, 1,570 ಕೋಟಿ ರೂಪಾಯ...