ಭಾರತ, ಮಾರ್ಚ್ 22 -- ಬೆಂಗಳೂರು: ಬಿಡದಿಯಲ್ಲಿ ನಾಳೆ (ಮಾರ್ಚ್ 23) ನಡೆಯಲಿರುವ ಹಾಫ್ ಮ್ಯಾರಥಾನ್‌ನಲ್ಲಿ ಭಾಗವಹಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಗಮವು (ಬಿಎಂಆರ್‌ಸಿಎಲ್) ಬೆಳಿಗ್ಗೆ 5 ಗಂಟೆಯಿಂದ ಮೆಟ್ರೋ ರೈಲುಗಳ ಓಡಾಟವನ್ನು ಆರಂಭಿಸಲಿದೆ. ಸಾಮಾನ್ಯವಾಗಿ ಭಾನುವಾರದ ದಿನಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ರೈಲು ಓಡಾಟ ಆರಂಭವಾಗುತ್ತದೆ.

ನಾಲ್ಕು ಟರ್ಮಿನಲ್ ನಿಲ್ದಾಣಗಳಿಂದ ಮೆಟ್ರೋ ರೈಲುಗಳು ಬೆಳಿಗ್ಗೆ 7 ಗಂಟೆಗೆ ಬದಲಾಗಿ ಬೆಳಿಗ್ಗೆ 5 ಗಂಟೆಗೆ ಓಡಾಟ ಪ್ರಾರಂಭಿಸುತ್ತವೆ. ಮ್ಯಾರಥಾನ್‌ನಲ್ಲಿ ಭಾಗವಹಿಸುವವರಿಗೆ ಹೆಚ್ಚಿನ ಅನುಕೂಲ ಮಾಡಲು, ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಚಲ್ಲಘಟ್ಟ ಕಡೆಗೆ ಸೇವೆಗಳು ಬೆಳಿಗ್ಗೆ 4 ಗಂಟೆಯಿಂದಲೇ ಪ್ರಾರಂಭವಾಗಲಿವೆ. ಪರಿಷ್ಕೃತ ವೇಳಾಪಟ್ಟಿಯನ್ನು ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸುವಂತೆ ಬಿಎಂಆರ್‌ಸಿಎಲ್ ಪ್ರಯಾಣಿಕರನ್ನು ವಿನಂತಿಸಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಪಲ್ ಲೈನ್‌ನಲ್ಲಿ ಮೆಟ್ರೋ ಸ...