Chitradurga, ಮಾರ್ಚ್ 4 -- ಚಿತ್ರದುರ್ಗ: ಚಿತ್ರದುರ್ಗ ಜಿಲ್ಲ ಚಳ್ಳಕೆರೆ ತಾಲ್ಲೂಕಿನ ಪ್ರಸಿದ್ದ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ ಮಾರ್ಚ್ 09 ರಿಂದ 24 ರವರೆಗೆ ನಿಗದಿಯಾಗಿದೆ. ಮಾರ್ಚ್ 16ರಂದು ದೊಡ್ಡ ರಥೋತ್ಸವ ನಡೆಯಲಿದೆ. ಎರಡು ವಾರಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ದಿನದಂದು ವಿವಿಧೆಡೆಗಳಿಂದ 3 ರಿಂದ 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ. ಈ ಬಾರಿ ನಾಯಕನಹಟ್ಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಸಿಲು ಹೆಚ್ಚಿರುವ ಕಾರಣ ಭಕ್ತಾದಿಗಳಿಗೆ ವ್ಯವಸ್ಥೆಗಳನ್ನು ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಹೆಚ್ಚುವರಿ ಬಸ್‌ ಸೇವೆ, ಭಕ್ತರಿಗೆ ಕುಡಿಯುವ ನೀರು ಸಹಿತ ಮೂಲಸೌಕರ್ಯಗಳನ್ನು ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಒದಗಿಸಲು ಚಿತ್ರದುರ್ಗ ಜಿಲ್ಲಾಡಳಿತ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಕ್ಷೇತ್ರದಲ್ಲಿ ಇದೇ ಮಾರ್ಚ್ 09 ರಿಂದ 24 ರವರೆಗೆ ಜಾತ್ರೆ ನಡೆಯಲಿದ್ದು, ಜಾತ್ರೆಯಲ್ಲಿ ಕ...