Chitradurga, ಮಾರ್ಚ್ 17 -- NayakanaHatti Jatre 2025: ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿ ಶ್ರೀಕ್ಷೇತ್ರ ನಾಯಕನಹಟ್ಟಿ ನೆಲಸಿದ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು. ಸುಡು ಬಿಸಿಲ ನಡುವೆಯೂ ಲಕ್ಷಾಂತರ ಭಕ್ತರು ವೈಭವದ ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಸಾಕ್ಷೀಯಾದರು. ಭಕ್ತಿ ಭಾವ ಸಮರ್ಪಿಸಿದರು. ಮಧ್ಯ ಕರ್ನಾಟಕದ ಪವಾಡ ಪುರುಷ ಹಾಗೂ ಕಾಯಕಯೋಗಿ ಎಂದೇ ಪ್ರಸಿದ್ದಿಯಾಗಿರುವ ಚಿತ್ರದುರ್‌ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವವು ಭಾನುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ನಾಡಿನ ನಾನಾ ಭಾಗಗಳಿಂದ ಬಂದಿದ್ದ ಭಕ್ತಗಣ, ಸ್ಥಳೀಯರು. ಗಣ್ಯರು, ದೇವಸ್ಥಾನದ ಪ್ರಮುಖರ ಸಮ್ಮುಖದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ರಥೋತ್ಸವ ಸಡಗರದಿಂದಲೇ ಜರುಗಿತು.ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಕಾರಜೋಳ, ಮೊಳಕಾಲ್ಮೂರು ಶ...