Mysuru, ಏಪ್ರಿಲ್ 7 -- Nrega Employment: ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮ-ನರೇಗಾ) ಯೋಜನೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಸ್ತ್ರೀ ಚೇತನ ಯೋಜನೆಯನ್ನು ಜಾರಿಗೊಳಿಸಿದೆ. ಮುಖ್ಯಮಂತ್ರಿ ತವರು ಮೈಸೂರು ಜಿಲ್ಲೆಯಲ್ಲೂ ಅಭಿಯಾನ ಪ್ರಾರಂಭಗೊಂಡಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸಿಕೆ ಹೆಚ್ಚಿಸಲು ಸ್ತ್ರಿ ಚೇತನಾ ಅಭಿಯಾನದ ಮೂಲಕ ಪ್ರಯತ್ನ ನಡೆಸಿದೆ. ಮ-ನರೇಗಾ ಸಂಪೂರ್ಣವಾಗಿ ಮಹಿಳಾ ಸ್ನೇಹಿ ಎಂಬುದಾಗಿ ಪರಿಚಯಿಸುವ ಉದ್ದೇಶವನ್ನು ಸ್ತ್ರೀ ಚೇತನ ಅಭಿಯಾನ ಒಳಗೊಂಡಿದ್ದು, ಉತ್ತಮ ಪ್ರತಿಕ್ರಿಯೆಯೂ ಎಲ್ಲೆಡೆ ದೊರೆಯುತ್ತಿದೆ.

ಮ-ನರೇಗಾದಲ್ಲಿ ಶೇ.50ರಷ್ಟಿರುವ ಮಹಿಳಾ ಕೂಲಿಕಾರ್ಮಿಕರ ಸಂಖ್ಯೆಯನ್ನು ಶೇ.60ಕ್ಕೆ ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ. ಮಾತ್ರವಲ್ಲದೆ, ಮೂರು ತಿಂಗಳು ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ಆದ್ಯತೆ ನೀಡುವುದು. ತಾಯಿ ಮತ್ತು ಮಕ್ಕಳಿಗೆ...