Bangalore, ಮಾರ್ಚ್ 29 -- ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ 2025 ಏಪ್ರಿಲ್ 01 ರಿಂದ ದಿನದ ಕೂಲಿ ಮೊತ್ತವನ್ನು ರೂ. 349 ರಿಂದ 370ಕ್ಕೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅಕುಶಲ ಕೂಲಿಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 370 ರೂ ಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇನ್ನು ಮುಂದೆ ನರೇಗಾ ಕೂಲಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

2024-25 ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ದಿನಗೂಲಿ ದರ 349 ರೂ.ಗಳಿದ್ದು, 2025-26 ನೇ ಸಾಲಿನಲ್ಲಿ ಏಪ್ರಿಲ್ 01 ರಿಂದ 370 ರೂ. ಗಳ ದಿನಗೂಲಿ ದರವನ್ನು ನಿಗದಿಪಡಿಸಿದೆ.

ನರೇಗಾ ಯೋಜನೆಯಲ್ಲಿ ಹೆಣ್ಣು ಮತ್...